Tuesday, April 21, 2026
Home ದಾವಣಗೆರೆದಾವಣಗೆರೆಯಲ್ಲಿ ರಾಷ್ಟ್ರೀಯ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿಯ ಚಾಲನೆ

ದಾವಣಗೆರೆಯಲ್ಲಿ ರಾಷ್ಟ್ರೀಯ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿಯ ಚಾಲನೆ

by admin
0 comments

ದಾವಣಗೆರೆಯಲ್ಲಿ ರಾಷ್ಟ್ರೀಯ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿಯ ಚಾಲನೆ

ದಾವಣಗೆರೆ: “ಕ್ರಿಕೆಟ್ ಒಂದು ದೇಶವನ್ನೇ ಒಗ್ಗೂಡಿಸುವ ಕ್ರೀಡೆ. ಭಾರತದಲ್ಲಿ ಕ್ರಿಕೆಟ್‌ಗೆ ಹೆಚ್ಚಿನ ಮಹತ್ವ ನೀಡಲಾಗಿದೆ,” ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಮತ್ತು ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ ಮಂಗಳವಾರ ಸಂಜೆ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ ಅಂತರರಾಷ್ಟ್ರೀಯ ಮಟ್ಟದ ‘ಹೊನಲು-ಬೆಳಕಿನ’ ಲೀಗ್ ಕಂ ನಾಕೌಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.

ಡಾ. ಮಲ್ಲಿಕಾರ್ಜುನ್ ಅವರು ತಮ್ಮ ಭಾಷಣದಲ್ಲಿ, “ದಾವಣಗೆರೆ ಕ್ರೀಡಾಸಕ್ತರ ಪ್ರೋತ್ಸಾಹದಿಂದ ಸತತವಾಗಿ 18 ವರ್ಷಗಳಿಂದ ಈ ಕ್ರಿಕೆಟ್ ಪಂದ್ಯಾವಳಿ ಅದ್ದೂರಿಯಾಗಿ ನಡೆಯುತ್ತಿದೆ. ಐದು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ನೇಪಾಳ, ಶ್ರೀಲಂಕಾ ಸೇರಿದಂತೆ ವಿದೇಶಿ ಮತ್ತು ಹೊರ ರಾಜ್ಯಗಳ 56 ತಂಡಗಳು ಭಾಗವಹಿಸಲಿವೆ,” ಎಂದರು. ದೇಶ-ವಿದೇಶಗಳಿಂದ ಬಂದಿರುವ ಕ್ರೀಡಾಪಟುಗಳು ದಾವಣಗೆರೆಯ ಆತಿಥ್ಯವನ್ನು ಸ್ವೀಕರಿಸಿ, ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ, ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕೆಂದು ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ಪಂದ್ಯಾವಳಿ ಯಶಸ್ವಿಯಾಗಲಿ ಎಂದು ಶುಭಕೋರಿಕೆ ಸಲ್ಲಿಸಿದರು.

ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ಮತ್ತು ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು ಪ್ರಾಸ್ತಾವಿಕ ಭಾಷಣದಲ್ಲಿ, “ಸುಮಾರು 750 ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ನೇಪಾಳ, ಶ್ರೀಲಂಕಾ ದೇಶಗಳು ಸೇರಿದಂತೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳಿಗೆ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗಿದೆ,” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘಟಕ ಜಯಪ್ರಕಾಶ್ ಗೌಡ, ಶ್ರೀನಿವಾಸ ಶಿವಗಂಗಾ, ಮಾಜಿ ಮೇಯರ್ ಕೆ. ಚಮನ್ ಸಾಬ್, ಅಶ್ವಿನಿ ಪ್ರಶಾಂತ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್ ರಾವ್ ಜಾಧವ್, ಮಾಜಿ ಸದಸ್ಯ ಎ. ನಾಗರಾಜ್, ಲತಿಕಾ ದಿನೇಶ್ ಕೆ. ಶೆಟ್ಟಿ, ಕೋಚ್ ಗೋಪಾಲಕೃಷ್ಣ, ತಿಮ್ಮೇಶ್, ವರ್ತಕ ಗುರುಮೂರ್ತಿ, ಅಶೋಕ್ ತುಮಕೂರು, ಜೆ.ಹೆಚ್.ಪಟೇಲ್ ಕಾಲೇಜಿನ ಕಾರ್ಯದರ್ಶಿ ಮುಸ್ತಾಪ್, ಮಹಿಳಾ ಮುಖಂಡಿಯರು ಎಂ.ಹೆಚ್.ಮಂಗಳಮ್ಮ, ಮಂಜಮ್ಮ, ಸಲ್ಮಾಬಾನು, ಯಶೋದಮ್ಮ, ಕಾವ್ಯ, ಸವಿತಾ ಚಂದ್ರಶೇಖರ್, ಗೀತಾ ಚಂದ್ರಶೇಖರ್, ಸುಧಾ ನಂದೀಶ್, ಶುಭ ಮುಂತಾದವರು ಉಪಸ್ಥಿತರಿದ್ದರು.

You may also like

Leave a Comment