Thursday, April 16, 2026
Home ಅಪರಾಧದಾವಣಗೆರೆ: ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

ದಾವಣಗೆರೆ: ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರ ಬಂಧನ

by admin
0 comments

ದಾವಣಗೆರೆ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಶಾಮನೂರು ವೇದಮೂರ್ತಿ ಸೇರಿದಂತೆ ನಾಲ್ವರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದು, ಶಾಮನೂರು ವೇದಮೂರ್ತಿ ಅಲಿಯಾಸ್ ಜಿ.ಎಸ್. ವೇದಮೂರ್ತಿ, ರಾಜಸ್ಥಾನ ಮೂಲದ ರಾಮ್ ಸ್ವರೂಪ್ ಹಾಗೂ ದೊನಾರಮ್, ದಾವಣಗೆರೆ ಸಿದ್ದವೀರಪ್ಪ ಬಡಾವಣೆಯ ದೇವಕಿಶನ್ ಬಂಧಿತ ಆರೋಪಿಗಳಾಗಿದ್ದಾರೆ. ತಪ್ಪಿಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಖಚಿತ ಮಾಹಿತಿ ಆಧರಿಸಿ ವಿದ್ಯಾನಗರ ಪೊಲೀಸರು ನಡೆಸಿದ ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್ ಹಾಗೂ 90 ಗ್ರಾಂ ಬ್ರೌನ್ ಶುಗರ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಶಾಮನೂರು ವೇದಮೂರ್ತಿ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. ಇಂತಹ ವ್ಯಕ್ತಿಯೊಬ್ಬರು ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವುದು ಕಾಂಗ್ರೆಸ್ ವಲಯದಲ್ಲಿ ಅಚ್ಚರಿ ಮೂಡಿಸಿದೆ.

ರಾಜಸ್ಥಾನ ಮೂಲದ ಆರೋಪಿಗಳಿಂದ ಡ್ರಗ್ಸ್ ತರಿಸಿ ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಆರೋಪವೂ ಶಾಮನೂರು ವೇದಮೂರ್ತಿ ಮೇಲಿದ್ದು, ಡ್ರಗ್ಸ್ ಸೇವನೆ ಸಂದರ್ಭದಲ್ಲೇ ಅವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತರ ಬಳಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್ ಮತ್ತು 90 ಗ್ರಾಂ ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಲಕ್ಷಾಂತರ ರೂಪಾಯಿ ಎಂದು ಅಂದಾಜಿಸಲಾಗಿದೆ. ರಾಜಸ್ಥಾನ ಮೂಲದ ಆರೋಪಿಗಳಿಂದ ಡ್ರಗ್ಸ್ ತರಿಸಿ ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಗೆ ಪೂರೈಕೆ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ನಗರದಲ್ಲಿ ನಡೆದ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ಶಾಮನೂರು ವೇದಮೂರ್ತಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾಳಿಯಲ್ಲಿ 290 ಗ್ರಾಂ ಸಿಂಥೆಟಿಕ್ ಡ್ರಗ್ಸ್ ಹಾಗೂ 90 ಗ್ರಾಂ ಬ್ರೌನ್ ಶುಗರ್ ವಶಕ್ಕೆ ಪಡೆಯಲಾಗಿದೆ. ರಿಯಲ್ ಎಸ್ಟೇಟ್ ಉದ್ಯಮ ಹಿನ್ನೆಲೆ ಹೊಂದಿದ್ದ ಶಾಮನೂರು ವೇದಮೂರ್ತಿ ರಾಜಸ್ಥಾನ ಮೂಲದ ಆರೋಪಿಗಳ ಜೊತೆಗೂಡಿ ಡ್ರಗ್ಸ್ ಪೂರೈಕೆ ಜಾಲದಲ್ಲಿ ತೊಡಗಿಸಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

 

You may also like

Leave a Comment