ದಾವಣಗೆರೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Spread the love

ದಾವಣಗೆರೆ: ದಾವಣಗೆರೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ, ಡಿಪ್ಲೋಮೋ ಹಾಗೂ ಐ.ಟಿ.ಐ ಕೋರ್ಸ್‌ನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮಾತ್ರ ಈ ಪ್ರವೇಶಾತಿ ಅನ್ವಯಿಸಲಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಅಧಿಕೃತ ವೆಬ್‌ಸೈಟ್ https://shp.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಜೂನ್‌ 05 ರಿಂದ ಸಲ್ಲಿಸಬಹುದಾಗಿದ್ದು, ಜೂನ್‌ 30 ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವಾಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 2.50 ಲಕ್ಷಗಳ ಒಳಗಿರಬೇಕು.

ವಿದ್ಯಾರ್ಥಿ ನಿಲಯಗಳ ಪ್ರವೇಶಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 08192-250022 ಅಥವಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ ಸಂಖ್ಯೆ: 08192-250066 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *