Monday, June 1, 2026
Home ದಾವಣಗೆರೆದಾವಣಗೆರೆ: ಫೆ.22 ರಿಂದ 4 ದಿನ ಮದ್ಯ ಮಾರಾಟ ಸ್ಥಗಿತ

ದಾವಣಗೆರೆ: ಫೆ.22 ರಿಂದ 4 ದಿನ ಮದ್ಯ ಮಾರಾಟ ಸ್ಥಗಿತ

by admin
0 comments

ದಾವಣಗೆರೆ ನಗರದಲ್ಲಿ ನಡೆಯುವ ಶ್ರೀ ದುರ್ಗಾಂಬಿಕಾ ದೇವಿ ಮತ್ತು ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 22 ರಿಂದ 25 ರವರೆಗೆ ದೇವಾಲಯದ ಸುತ್ತಲಿನ 500 ಮೀಟರ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸರಬರಾಜಿಗೆ ನಿಷೇಧ ಹೇರಲಾಗಿದೆ. ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ಈ ಆದೇಶ ಹೊರಡಿಸಿದ್ದು, ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಶ್ರೀಕಂಠೀರವ ಸ್ಟುಡಿಯೋಸ್ ಅಧ್ಯಕ್ಷರ ಪ್ರವಾಸ

ಶ್ರೀಕಂಠೀರವ ಸ್ಟುಡಿಯೋಸ್ ನಿಯಮಿತದ ಅಧ್ಯಕ್ಷರಾದ ಮಹಬೂಬ್ ಪಾಷ ಅವರು ಫೆಬ್ರವರಿ 21 ಮತ್ತು 22 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ಫೆ.21 ರಂದು ಮಧ್ಯಾಹ್ನ 3 ಗಂಟೆಗೆ ದಾವಣಗೆರೆಗೆ ಆಗಮಿಸಿ, ಸ್ಥಳೀಯ ಪಕ್ಷದ ಕಚೇರಿಯಲ್ಲಿ ಮುಖಂಡರೊಂದಿಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ. ಬಳಿಕ ಅಂದು ರಾತ್ರಿ ವಾಸ್ತವ್ಯ ಹೂಡುವ ಅವರು, ಮರುದಿನ (ಫೆ.22) ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆಯ ಯರಗುಂಟೆ ಮತ್ತು ಓಬಜ್ಜಿಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಫೆ.21 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

ಬೆಸ್ಕಾಂ ಪ್ರಕಟಣೆಯ ಪ್ರಕಾರ, ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ:

· ಕರೂರು ಕೈಗಾರಿಕಾ ಪ್ರದೇಶ
· ಜಿಲ್ಲಾಧಿಕಾರಿ ಕಚೇರಿ, ಜಿ.ಎಂ.ಐ.ಟಿ. ಕಾಲೇಜು
· ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ
· ವಿಜಯ ನಗರ, ಅಶೋಕ ನಗರ
· ಆರ್.ಟಿ.ಓ. ಕಚೇರಿ, ಎಸ್.ಪಿ. ಕಚೇರಿ
· ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ
· ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ
· ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್
· ಯರಗುಂಟಾ, ಕೋಡಿಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳು
· ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್
· ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್
· ಕಡ್ಲೇಬಾಳು, ಹಳೆಕಡ್ಲೆಬಾಳು
· ಮಾಳಗೊಂಡನಹಳ್ಳಿ, ಅರಸಾಪುರ
· ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ

You may also like

Leave a Comment