ಜಿಮ್ ನಲ್ಲಿ ಮಹಿಳೆ ರಹಸ್ಯ ವಿಡಿಯೋ : ಟ್ರೈನರ್ ಇಸ್ಮಾಯಿಲ್ ಮೇಲೆ ಆರೋಪ

 

ದಾವಣಗೆರೆ: ನಗರದ ಸರಸ್ವತಿ ನಗರದಲ್ಲಿರುವ ಪವರ್ ಫಿಟ್ನೆಸ್ ಜಿಮ್‌ಗೆ ಸಂಬಂಧಿಸಿದಂತೆ ಆಘಾತಕಾರಿ ಆರೋಪವೊಂದು ಬೆಳಕಿಗೆ ಬಂದಿದೆ.

ಜಿಮ್ ಮಾಲೀಕ ಇಸ್ಮಾಯಿಲ್ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ವೀಡಿಯೋ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ಪ್ರಕರಣವು ನಗರದಲ್ಲಿ ತೀವ್ರ ಸಂಚಲನ ಮೂಡಿಸಿದೆ.

ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಕಳೆದ ಕೆಲವು ವರ್ಷಗಳಿಂದ ಜಿಮ್ ನಡೆಸುತ್ತಿದ್ದ ಇಸ್ಮಾಯಿಲ್, ಜಿಮ್‌ಗೆ ಬರುತ್ತಿದ್ದ ವಿವಾಹಿತ ಮಹಿಳೆಯರು ಹಾಗೂ ಯುವತಿಯರನ್ನು ಟಾರ್ಗೆಟ್ ಮಾಡುತ್ತಿದ್ದರೆಂದು ಆರೋಪಿಸಲಾಗಿದೆ. ಅಲ್ಲದೆ, ಕೆಲವರೊಂದಿಗೆ ಪರಿಚಯ ಬೆಳೆಸಲು ಹಿಂದೂ ಹೆಸರನ್ನು ಬಳಸುತ್ತಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇದಲ್ಲದೆ, ದೌರ್ಜನ್ಯ ಸಮಯದಲ್ಲಿ ರಹಸ್ಯವಾಗಿ ವೀಡಿಯೋ ಚಿತ್ರೀಕರಣ ಮಾಡಿ, ಆ ವಿಡಿಯೋಗಳನ್ನು ಮುಂದಿಟ್ಟುಕೊಂಡು ಹಣಕ್ಕೆ ಬೇಡಿಕೆ ಇಡುವುದು ಹಾಗೂ ಬೆದರಿಕೆ ಹಾಕುತ್ತಿದ್ದರೆಂಬ ಗಂಭೀರ ಆರೋಪಗಳು ಹೊರಬಿದ್ದಿವೆ.

ಈ ಘಟನೆ ಬಹಿರಂಗವಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬರುತ್ತಿದೆ. ಕೆಲವು ಸಂಘಟನೆಗಳು ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆ ನಡೆಸಿದ್ದು, ಜಿಮ್‌ನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಕುರಿತು ಪೊಲೀಸ್ ಇಲಾಖೆಯ ತನಿಖೆ ಮುಂದುವರಿದಿದ್ದು, ನಿಜಾಸತ್ಯತೆ ತನಿಖೆಯಿಂದಲೇ ಹೊರಬರಬೇಕಿದೆ.

Leave a Reply

Your email address will not be published. Required fields are marked *